ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ 40 ನಾಯಕರನ್ನೊಳಗೊಂಡ ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆ ಮಾಡಿದೆ.
ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಶಶಿ ತರೂರ್, ರಮ್ಯಾ, ಉಮಾಶ್ರೀ, ಜಗದೀಶ್ ಶೆಟ್ಟರ್, ಸತೀಶ್ ಜಾರಕಿಹೊಳಿ, ಡಿ.ಕೆ.ಸುರೇಶ್, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ ಸೇರಿ ದಮತೆ 40 ನಾಯಕರನ್ನು ಹೆಸರಿಸಲಾಗಿದೆ.