ಪುರಿ ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು

WhatsApp
Telegram
Facebook
Twitter
LinkedIn

ಗಾಂಧೀನಗರ : ಅಹಮದಾಬಾದ್‌ನಲ್ಲಿ ಶುಕ್ರವಾರ ನಡೆದ 148ನೇ ಜಗನ್ನಾಥ ರಥಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಪರಿಣಾಮ ಇಬ್ಬರು ಭಕ್ತರು ಗಾಯಗೊಂಡ ಘಟನೆ ನಡೆದಿದೆ.

ಶುಕ್ರವಾರ ಬೆಳಗ್ಗೆ 10:15 ರ ಸುಮಾರಿಗೆ ರಥಯಾತ್ರೆ ನಗರದ ಖಾದಿಯಾ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು. ಈ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಯೊಂದು ಇದ್ದಕ್ಕಿದ್ದಂತೆ ಗುಂಪಿನಿಂದ ದೂರ ಸರಿದು ವಿರುದ್ಧ ದಿಕ್ಕಿನಲ್ಲಿ ಓಡಲು ಪ್ರಾರಂಭಿಸಿತು. ಕಿರಿದಾದ ಬೀದಿಯಾದ್ದರಿಂದ ಜನರು ಬೆಚ್ಚಿಬಿದ್ದರು. ಇದರೊಂದಿಗೆ ಇನ್ನೆರಡು ಆನೆಗಳು ಸಹ ಓಡಿದ್ದು, ಬಳಿಕ ಮಾವತರು ಆನೆಗಳನ್ನು ನಿಯಂತ್ರಿಸಿದ್ದಾರೆ. ಆನೆಗಳನ್ನು ಕರೆದೊಯ್ದ ಬಳಿಕ ಮೆರವಣಿಗೆ ಮುಂದುವರೆಸಲಾಯಿತು.

ಈ ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಗಾಯಗೊಂಡ ಭಕ್ತನನ್ನು ಚಿಕಿತ್ಸೆಗಾಗಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon