ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ
ಈ ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 30 ಆಗಿದೆ.ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆ ವಿವರ: ಒಟ್ಟು 13 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದ್ದು, ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್- ಸ್ಕಿಲ್, ಕ್ಲಸ್ಟರ್ ಸೂಪರ್ವೈಸರ್, ತಾಲೂಕ್ ಪ್ರೋಗ್ರಾಂ ಮ್ಯಾನೇಜರ್ – ಎಸ್ವಿಇಪಿ, ಆಫೀಸ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ತಕ್ಕಂತೆ ಎಂಬಿಎ, ಎಂಎಸ್ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.ಅರ್ಜಿ ಸಲ್ಲಿಕೆ: ಕರ್ನಾಟಕ ಸರ್ಕಾರದ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಧಿಕೃತ ಜಾಲತಾಣದ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ
ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಮೇ 30 ಆಗಿದೆ.ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ksrlps.karnataka.gov.in ಭೇಟಿ ನೀಡಬಹುದಾಗಿದೆ.