ರಾಂಚಿ : ಭದ್ರತಾ ಪಡೆ ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿಯನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ.
ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬುರ್ಜುವಾ ಬೆಟ್ಟದಲ್ಲಿ ಭಾನುವಾರ (ಸೆ.7) ಬೆಳಗ್ಗೆ ಎನ್‌ಕೌಂಟರ್ ನಡೆದಿದೆ.
ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಎನ್‌ಕೌಂಟರ್ ಬಳಿಕ ನಡೆದ ಶೋಧ ಕಾರ್ಯಾಚರಣೆಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸಿಪಿಐನ (ಮಾವೋವಾದಿ) ಸ್ವಯಂ ಘೋಷಿತ ವಲಯ ಕಮಾಂಡರ್ ಅಮಿತ್ ಹನ್ಸ್ದಾ ಅಲಿಯಾಸ್ ಆಪ್ತಾನ್ ಎಂದು ಗುರುತಿಸಲಾಗಿದೆ.
ಈ ಮೊದಲು ಈ ವ್ಯಕ್ತಿಯನ್ನು ಪತ್ತೆಹಚ್ಚಿದರೆ 10 ಲಕ್ಷ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಸದ್ಯ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.