ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಈ ಪರೀಕ್ಷೆಯು ಏ. 4ರ ವರೆಗೆ ನಡೆಯಲಿದೆ.
ರಾಜ್ಯದ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 8,42,817 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಓದುತ್ತಿದ್ದಾರೆ. ಇವರನ್ನು ಹೊರತುಪಡಿಸಿ 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ ಒಟ್ಟು 8,96,447 ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 3,35,468 ಬಾಲಕರು ಮತ್ತು 3,78,389 ಬಾಲಕಿಯರು ಇದ್ದಾರೆ. ಜೊತೆಗೆ ಐವರು ತೃತೀಯ ಲಿಂಗಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಬೆಳಗ್ಗೆ 10 ರಿಂದ ಪ್ರಾರಂಭವಾಗುವ ಪರೀಕ್ಷೆ ಮಧ್ಯಾಹ್ನ 1.15 ರವರೆಗೆ ನಡೆಯಲಿದೆ. ಇನ್ನು ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರದ ಜತೆಗೆ ಮಾನ್ಯವಾದ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಕ್ಕೆ ತರಬೇಕು ಎಂದು ಸೂಚಿಸಲಾಗಿದೆ.
ಇನ್ನು ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 30 ನಿಮಿಷಗಳ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಬೇಕು, ಇದರಿಂದಾಗಿ ವಿದ್ಯಾರ್ಥಿಗಳು ಸಕಾಲಿಕ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರದ ಜತೆಗೆ ಮಾನ್ಯವಾದ ಗುರುತಿನ ಚೀಟಿಯನ್ನು ತರಬೇಕು. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ತರಬಾರದು ಎಂದು ನಿರ್ದೇಶಿಸಲಾಗಿದೆ.