ಚಿತ್ರದುರ್ಗ :ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿ ಕಾಪಾಡಲು ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ.
ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಜಿಲ್ಲಾ ಮತ್ತು ತಾಲ್ಲೂಕು ಕಚೇರಿಯಲ್ಲಿ ಸ್ಥಾಪನೆಗೊಂಡಿರುವ ಸಹಾಯವಾಣಿ ಮೂಲಕ ತಮ್ಮ ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ 8277862928, ಚಿತ್ರದುರ್ಗ ತಾಲ್ಲೂಕು ಕಚೇರಿ 7353829559, ಚಳ್ಳಕೆರೆ ತಾಲ್ಲೂಕು ಕಚೇರಿ-9164064797, ಹಿರಿಯೂರು ತಾಲ್ಲೂಕು ಕಚೇರಿ-9449210282, ಹೊಸದುರ್ಗ ತಾಲ್ಲೂಕು ಕಚೇರಿ-9611460183, ಹೊಳಲ್ಕೆರೆ ತಾಲ್ಲೂಕು ಕಚೇರಿ-7019732031 ಹಾಗೂ ಮೊಳಕಾಲ್ಮುರು ತಾಲ್ಲೂಕು ಕಚೇರಿ-9448948032 ಗೆ ಕರೆ ಮಾಡಬಹುದು. ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.