ಮೇಟಿಕುರ್ಕಿ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ: ದುಡಿಯುವ ಕೈಗಳಿಗೆ ಕೆಲಸವೂ ಗ್ಯಾರಂಟಿ.!!

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಮೇಟಿಕುರ್ಕಿ ಗ್ರಾಮದ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದ್ದು, ಇದರಿಂದ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಲಿದ್ದು, ದುಡಿಯುವ ಕೈಗಳಿಗೆ ಕೆಲಸವೂ ಸಹ ಗ್ಯಾರಂಟಿಯಾಗುತ್ತದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆಶಯ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ವಿಜ್ಞಾನ  ಕಾಲೇಜು ಪಕ್ಕದ ಮುರುಘ  ರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿದರು.

ದಾವಣಗೆರೆ-ತುಮಕೂರು ನಡುವಿನ ನೇರ ರೈಲು ಮಾರ್ಗದ ನಿರ್ಮಾಣಕ್ಕೆ 1000 ಎಕರೆಗೂ ಹೆಚ್ಚು ಜಮೀನನ್ನು ಸ್ವಾಧೀನಪಡಿಸಿಕೊಂಡು, ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ರೈಲ್ವೆ ಅಭಿವೃದ್ಧಿ ಕಾಮಗಾರಿ ಚಾಲನೆಯಲ್ಲಿದೆ ಎಂದರು.

ಹೊಸದುರ್ಗ ತಾಲ್ಲೂಕಿನಲ್ಲಿ ವಾಣಿ ವಿಲಾಸಸಾಗರ ಜಲಾಶಯದಿಂದ ಮುಳುಗಡೆಯಾಗುವ ಜಮೀನು ಪ್ರದೇಶಗಳನ್ನು ತಡೆಯುವ ಸಲುವಾಗಿ ರೂ.124 ಕೋಟಿಗಳ ಅನುದಾನ, ಜಲಾಶಯದ ಕಾಲುವೆಗಳ ಆಧುನೀಕರಣಕ್ಕಾಗಿ ರೂ.1274 ಕೋಟಿಗಳ ವೆಚ್ಚದಲ್ಲಿ ಯೋಜನೆಯನ್ನು ಸಹ ಸಿದ್ದಪಡಿಸಲಾಗುತ್ತದೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರ ಕುಡಿಯುವ ನೀರಿಗಾಗಿ ಮನೆ ಮನೆಗೆ ನೀರಿನ ಸಂಪರ್ಕ ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿವಿಧ ಹಂತಗಳಲ್ಲಿ ಸುಮಾರು 392.79 ಕೋಟಿಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಚಾಲನೆಯಲ್ಲಿರುತ್ತವೆ. ಚಿತ್ರದುರ್ಗ ಜಿಲ್ಲೆಯು ಅಭಿವೃದ್ಧಿಯ ಹಾದಿಯಲ್ಲಿಯೂ ಸಹ ಮುಂದಿದೆ ಎಂದು ಹೇಳಿದರು.

ಸಂವಿಧಾನ ರಾಷ್ಟ್ರ ಮುನ್ನಡೆಸುವ ಕಾನೂನು ದೀವಿಗೆ ಅಷ್ಟೇ ಅಲ್ಲ, ಮಾನವೀಯ ಮೌಲ್ಯಗಳ ಸಂಕಥನವೂ ಆಗಿದೆ. ವ್ಯಕ್ತಿಯೊಬ್ಬ ತನ್ನ ಅನನ್ಯತೆಯನ್ನು ಉಳಿಸಿಕೊಂಡು ಎಲ್ಲರೊಳಗೊಂದಾಗಿ ಬದುಕುವ ಅಪೂರ್ವ ಅವಕಾಶವಾಗಿದೆ. ಸಮಾಜದ ತಳವರ್ಗದ ಮನುಷ್ಯನಿಗೂ ಧ್ವನಿಯಾಗಿ ಸಮತೆ, ಮಮತೆ, ಮಾನವೀಯತೆ ಭ್ರಾತೃತ್ವದ ನೆಲೆಗಟ್ಟಿನಲ್ಲಿ ರೂಪುಗೊಂಡಿರುವ ಇದು ಭಾರತೀಯರ ಪಾಲಿಗೆ ಒಂದು ಕಾವ್ಯವೂ, ಧರ್ಮವೂ, ಜೀವನ ವಿಧಾನವೂ, ಕರ್ತವ್ಯ ಪಥವೂ ಆಗಿ ವರ್ಗಾತೀತ, ಜಾತ್ಯತೀತ, ಧರ್ಮಾತೀತವಾಗಿ ಎಲ್ಲರ ಹಕ್ಕುಗಳನ್ನು ರಕ್ಷಣೆ ಮಾಡುವ ಕರ್ತವ್ಯಗಳನ್ನು ಬೋಧಿಸುತ್ತದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ: ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಚಳ್ಳಕೆರೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಬಿ.ನಾಗರಾಜ್, ಹಿರಿಯೂರು ಪೊಲೀಸ್ ಠಾಣೆ ಸಿ.ಪಿ.ಸಿ ಬಿ.ವೈ.ಸಿದ್ಧಲಿಂಗೇಶ್ವರ, ಚಿತ್ರದುರ್ಗ ಗ್ರಾಮಾಂತರ  ಪೊಲೀಸ್   ಠಾಣೆ  ಪೊಲೀಸ್   ನಿರೀಕ್ಷಕ ಮುದ್ದುರಾಜ್, ನಾಯಕನಹಟ್ಟಿ  ಪೊಲೀಸ್   ನಿರೀಕ್ಷಕ ಶಿವಕುಮಾರ್, ಹೊಳಲ್ಕೆರೆ ಕರಗುಂಟೆ ಗ್ರಾಮ ಆಡಳಿತಾಧಿಕಾರಿ ತಿಪ್ಪೇಸ್ವಾಮಿ, ಮೊಳಕಾಲ್ಮೂರು ಮುರಡಿ ಗ್ರಾಮ ಆಡಳಿತಾಧಿಕಾರಿ ರತ್ನಮ್ಮ, ವಿಕಲಚೇತನರ ಅಭಿವೃದ್ಧಿಗಾಗಿ ಶ್ರಮಿಸಿದ ಶಿಕ್ಷಣ ಇಲಾಖೆಯ ಬಿ.ಐ.ಇ.ಅರ್.ಟಿ ರಾಜೀವ್, ಎ.ಪಿ.ಡಿ ಸರ್ಕಾರೇತರ ಸಂಸ್ಥೆಯ ನಂದಿನಿ, ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಶ್ವ ಮಾನವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಹೆಚ್.ಆರ್.ಸುಧಾ, ಕ್ರೀಡೆಯಲ್ಲಿ ಸಾಧನೆ ಮಾಡಿದ ಅಥ್ಲಿಟ್ ನೌಮನ್ ಅಹಮ್ಮದ್ ಷರೀಫ್, ಪ್ಯಾರ ಅಥ್ಲಿಟ್ ಶ್ರೀಹರಿ, ಮೊಳಕಾಲ್ಮೂರು ಆಸ್ಪತ್ರೆ ಪ್ರಸೂತಿ ತಜ್ಞ ಡಾ.ಮಂಜುನಾಥ್ ಅವರಿಗೆ ಗಣರಾಜೋತ್ಸವ ಶುಭ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಆಕರ್ಷಕ ಪಥ ಸಂಚಲನ: ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಈ ಬಾರಿ ಪರೇಡ್ ಕಮಾಂಡರ್ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಆರ್‍ಪಿಐ ಎಸ್.ಎಸ್.ಯುವರಾಜ್ ಅವರ ಮುಂದಾಳತ್ವದಲ್ಲಿ ಒಟ್ಟು 25 ತಂಡಗಳಿಂದ ಆಕರ್ಷಕ ಪಥಸಂಚಲನ ಜರುಗಿತು.

ಕಾರ್ಯಕ್ರಮದಲ್ಲಿ ಗೋವಿಂದ ಎಂ.ಕಾರಜೋಳ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ  ಪೊಲೀಸ್  ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon