ನವದೆಹಲಿ : ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಗುರುವಾರ (ಡಿಸೆಂಬರ್ 26) ದೆಹಲಿಯಲ್ಲಿ ತಮ್ಮ 92 ನೇ ವಯಸ್ಸಿನಲ್ಲಿ ನಿಧರಾಗಿದ್ದು, ನಾಳೆ ದೆಹಲಿ ಲೋದಿ ರಸ್ತೆಯಲ್ಲಿರುವ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.
ಡಾ. ಮನಮೋಹನ್ ಸಿಂಗ್ ಅವರು ಮಾಜಿ ಪ್ರಧಾನಿಯಾಗಿದ್ದಾರೆ. ಆದ್ದರಿಂದ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಅಂದರೆ ಡಿಸೆಂಬರ್ 28 ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕೇಂದ್ರ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದರರ್ಥ ಡಿಸೆಂಬರ್ 26 ರಿಂದ ಜನವರಿ 1 ರವರೆಗೆ ರಾಜ್ಯ ಶೋಕಾಚರಣೆ ಇರುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಏಳು ದಿನಗಳ ಕಾಲ ಕಾಂಗ್ರೆಸ್ ತನ್ನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.