ಬೆಂಗಳೂರು: ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. ಬ್ಯಾಗ್ ತುಂಬಾ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ. ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್ ನಿಲ್ದಾಣಕ್ಕೆ ಜಿಲೆಟಿನ್ ಕಡ್ಡಿ ತಂದಿಟ್ಟಿದ್ದು ಯಾರು? ಯಾವ ಉದ್ದೇಶಕ್ಕಾಗಿ ಇದನ್ನು ತರಲಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
