ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಯನ್ನು 2025ರ ಜನವರಿ 10ರವರೆಗೆ ವಿಸ್ತರಿಸಲಾಗಿದೆ.
ಪದವಿ ಮಟ್ಟದ ಕೋರ್ಸ್, ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸಿನ ಸಾಮಾನ್ಯ ವಿದ್ಯಾರ್ಥಿಗಳು ಮಾತ್ರ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶ https://shp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.