Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಅಸಾಧಾರಣ ಸಾಧನೆ; ಹೊಯ್ಸಳ, ಕೆಳದಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

0

 

ಹೊಸಪೇಟೆ: ಆಯ್ದ ವಿವಿಧ ವಲಯಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5-18 ವರ್ಷದ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ನೀಡಲಾಗುವ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಉಪನಿರ್ದೇಶಕ ವೀರನಗೌಡ ಅವರು ತಿಳಿಸಿದ್ದಾರೆ.

5 ರಿಂದ 18 ವರ್ಷದೊಳಗಿನ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಹಾಗೂ ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು ಬಾಲಕರಿಗೆ ಹೊಯ್ಸಳ, ಬಾಲಕಿಯರಿಗೆ ಕೆಳದಿ ಚನ್ನಮ್ಮ ಪ್ರಶಸ್ತಿ ನೀಡಲಾಗುತ್ತದೆ.

ಆಯ್ದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ತಲಾ 10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದ್ದು, ಅರ್ಹ ಮಕ್ಕಳು ಇಲಾಖೆಯಿಂದ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಯೊಂದಿಗೆ ಸೆ.15ರ ಒಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಮಾಹಿತಿಗಾಗಿ ಹೊಸಪೇಟೆ ತಾಲ್ಲೂಕಿನ ಕಾಲೇಜು ರಸ್ತೆಯಲ್ಲಿರುವ ರಾಜಾಪುರ ಸ್ಕೆöÊಸ್ 3ನೇ ಮಹಡಿಯಲ್ಲಿರುವ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು. ಸಂಪರ್ಕಿಸಲು ಮೊ.9971090599.

Leave A Reply

Your email address will not be published.