ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯದ ನಾನಾ ಕಡೆಗಳಲ್ಲಿ ನಡೆದಿದೆ.
ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18), ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.