ಮಂಗಳೂರು: ತೆಂಕು ತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್ (70) ನಿಧನರಾಗಿದ್ದಾರೆ.
ಕೊರಗದಾಸ ಅವರ ಬಳಿ ಯಕ್ಷಗಾನ ತರಬೇತಿ ಪಡೆದಿದ್ದ ಇವರು ಕುಂಡಾವು, ಸುಬ್ರಹ್ಮಣ್ಯ, ಕೊಲ್ಲೂರು, ಸುಂಕದ ಕಟ್ಟೆ, ಸುರತ್ಕಲ್ ಮತ್ತು ಕಟೀಲು ಮೇಳ ಸೇರಿದಂತೆ ವಿವಿಧ ಮೇಳಗಳಲ್ಲಿ ಐದು ದಶಕಗಳ ಕಾಲ ಯಕ್ಷಗಾನ ತಿರುಗಾಟ ನಡೆಸಿದ್ದರು.
ಇವರು ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
 
				 
         
         
         
															 
                     
                     
                     
                     
                    


































 
    
    
        