ಚಿತ್ರದುರ್ಗ: 2025-26ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ 15 ವಿದ್ಯಾರ್ಥಿಗಳ ಸೇರ್ಪಡೆ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಆಸಕ್ತರು ಹತ್ತಿರದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08194-230895, ಮೊಬೈಲ್ ಸಂಖ್ಯೆ 9980991048 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.