ಪಾಟ್ನಾ: ಗಾಂಧಿ ಮೈದಾನದಲ್ಲಿ ಆಮರಣಾಂತ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ಬೆಳಗ್ಗೆ ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಕಿಶೋರ್ ಅವರನ್ನು ಆಂಬ್ಯುಲೆನ್ಸ್‌ನಲ್ಲಿ “ಬಲವಂತವಾಗಿ” ಏಮ್ಸ್‌ಗೆ ಕರೆದೊಯ್ಯಲಾಯಿತು. ಆದರೆ ಕಿಶೋರ್ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ ಮತ್ತು ಆಮರಣಾಂತ ಉಪವಾಸವನ್ನು ಮುಂದುವರೆಸಲಿದ್ದಾರೆ ಎಂದು ಹೇಳಲಾಗಿದೆ. ಪಾಟ್ನಾ ಪೊಲೀಸರ ದೊಡ್ಡ ತಂಡವು ಕಿಶೋರ್ ಅವರನ್ನು ಪ್ರತಿಭಟನಾ ಸ್ಥಳದಿಂದ ಬಂಧಿಸಿದ್ದಾರೆ ಮತ್ತು ಇತರ ಪ್ರತಿಭಟನಾಕಾರರನ್ನು ಸ್ಥಳದಿಂದ ಹೊರಹೋಗುವಂತೆ ಸೂಚಿಸಿದರು.
ಪೂರ್ಣಾವಧಿ ರಾಜಕೀಯಕ್ಕೆ ಧುಮುಕುವ ಮುನ್ನ ಚುನಾವಣಾ ತಂತ್ರಗಾರರಾಗಿದ್ದ ಕಿಶೋರ್ ಅವರು ನಡೆಸುತ್ತಿರುವ ಸಮಗ್ರ 70ನೇ ಸಂಯೋಜಿತ (ಪ್ರಾಥಮಿಕ) ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬೆಂಬಲಕ್ಕಾಗಿ ಜನವರಿ 2 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಬಿಹಾರ ಸಾರ್ವಜನಿಕ ಸೇವಾ ಆಯೋಗದಿಂದ (BPSC) ಪತ್ರಿಕೆ ಸೋರಿಕೆಯಾಗಿರುವುದರಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.