ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯಲ್ಲಿ ಒಂದು ಸಾವಿರ ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ಉಮಾನಾಥ್ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಹಣಕಾಸು ಇಲಾಖೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯಲ್ಲಿ ಒಂದು ಸಾವಿರ ಖಾಲಿ ಹುದ್ದೆಗಳನ್ನು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶೇಕಡ 70ರಷ್ಟು ಜನ ಕೃಷಿಗೆ ಅವಲಂಬಿಸಿದ್ದು, ಕೃಷಿ ಇಲಾಖೆಯಲ್ಲಿ ಶೇಕಡ 57 ರಷ್ಟು ಸಿಬ್ಬಂದಿ ಕೊರತೆ ಇದೆ. ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಖಾಲಿ ಇರುವ ಒಂದು ಸಾವಿರ ಹುದ್ದೆಗಳ ನೇಮಕಾತಿಯನ್ನು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.