ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ಹೆಸರುಗಳನ್ನು ತಮ್ಮ ವ್ಯಾಪ್ತಿಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರುಗಳೊಂದಿಗೆ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ, ಜಗಳೂರು ಕ್ಷೇತ್ರದಲ್ಲಿ 2215 ಪುರುಷ, 1138 ಮಹಿಳಾ ಮತದಾರರು ಒಟ್ಟು 3353, ಹರಿಹರ ಕ್ಷೇತ್ರದಲ್ಲಿ 3193 ಪುರುಷ, 2501 ಮಹಿಳೆಯರು ಒಟ್ಟು 5694, ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 6683 ಪುರುಷ, 5780 ಒಟ್ಟು 12463, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2250 ಪುರುಷ , 2201 ಮಹಿಳೆಯವರು ಒಟ್ಟು 4451 ಹಾಗೂ ಮಾಯಕೊಂಡ ಕ್ಷೇತ್ರದಲ್ಲಿ 2253 ಪುರುಷ, 1525 ಮಹಿಳಾ ಮತದಾರರು ಒಟ್ಟು 3778 ಮತದಾರರಿದ್ದು ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಒಟ್ಟಾರೆಯಾಗಿ ದಾವಣಗೆರೆ ಜಿಲ್ಲೆಯಲ್ಲಿ 16594 ಪುರುಷ, 13145 ಮಹಿಳಾ ಮತದಾರರು ಸೇರಿದಂತೆ 29739 ಒಟ್ಟು ಅಂತಿಮ ಮತದಾರಿದ್ದಾರೆ ಎಂದು ತಿಳಿಸಿದರು.
ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾದ ಮತದಾರರು, ತಮ್ಮ ವ್ಯಾಪ್ತಿಗೆ ಸಂಬಂಧಪಟ್ಟ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ಕಛೇರಿಗಳಲ್ಲಿ ಹೆಸರುಗಳನ್ನು ಪರಿಶೀಲಿಸಿಕೊಳ್ಳುವುದು. ಹಾಗೂ ದಾವಣಗೆರೆ ನಗರ ಮತ್ತು ಕಸಬಾ ಹೊಬಳಿ ವ್ಯಾಪ್ತಿಯಲ್ಲಿರುವವರು ಆಯುಕ್ತರು, ಮಹಾನಗರಪಾಲಿಕೆ, ದಾವಣಗೆರೆ ಕಚೇರಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ, ವಿವಿಧ ರಾಜಕೀಯ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.

































