ಬೆಂಗಳೂರು: ಏಕೆಂದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜೆಪಿನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ದೂರಿನ ಹಿನ್ನೆಲೆಯಲ್ಲಿ ಬಿಎನ್ಎಸ್ ಸೆಕ್ಷನ್ 351(3)(ಅನೈತಿಕತೆಯ ಆರೋಪ), 75(3) (ಅಶ್ಲೀಲ ಹೇಳಿಕೆ), 79(ಮಹಿಳೆಯ ಮಾನಕ್ಕೆ ಕುಂದು ತರುವ ಉದ್ದೇಶದಿಂದ ಪ್ರಯೋಗಿಸಲಾದ ಪದ) ಅಡಿ ರವಿ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

































