ಮೈಸೂರು :, ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಾರಣ ಚಾಮುಂಡೇಶ್ವರಿ ದೇಗುಲದ ಸೀರೆ ಕಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೃಷ್ಣರಾಜ ಪೊಲೀಸ್ ಠಾಣೆಗೆ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿಯಾಗಿರುವ ರೂಪ ದೂರು ಸಲ್ಲಿಸಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ರೂಪ ಅವರ ವಿರುದ್ಧ ಚಾಮುಂಡೇಶ್ವರಿ ಬೆಟ್ಟದಲ್ಲಿ ಸೀರೆ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ನಿನ್ನೆ ರಾತ್ರಿ ಕೆಆರ್ ಠಾಣೆಗೆ ರೂಪ ಅವರು ದೂರು ನೀಡಿದ್ದಾರೆ.