ಬೆಂಗಳೂರು: ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪದ ಮೇಲೆ ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹುಣಸಮಾನರಹಳ್ಳಿಯಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಲಾಗಿತ್ತು. ಈ ಸಂಬಂಧ ಸ್ಫೋಟ ತಡೆಯುವಂತೆ ಸ್ಥಳೀಯ ಜನರು ಕೂಡ ಪ್ರತಿಭಟನೆ ನಡೆಸಿದ್ದರು.
ಇದೀಗ ತಹಶೀಲ್ದಾರ್ ನೀಡಿರುವ ದೂರು ಆಧರಿಸಿ ಮುನಿರತ್ನ ಹಾಗೂ ಇತರೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ವರದಿಯಾಗಿದೆ.