ಬೆಂಗಳೂರು: ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿಸಿದ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ.
ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಇದುವರೆಗೂ 54 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ 10, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 12, ಅಗರ್ವಾಲ್ ಆಸ್ಪತ್ರೆಯಲ್ಲಿ 9, ನಾರಾಯಣ ನೇತ್ರಾಲಯದಲ್ಲಿ 23 ಮಂದಿ ಚಿಕಿತ್ಸೆ ಪಡೆದಿದ್ದಾರೆ.
ಇವುಗಳಲ್ಲಿ ಬೇರೆಯವರು ಸಿಡಿಸಿದ ಪಟಾಕಿಯಿಂದ ಕಣ್ಣಿನ ತೊಂದರೆಗೆ ಒಳಗಾದವರೇ ಹೆಚ್ಚು ತಿಳಿದುಬಂದಿದೆ.