ಬೆಂ,ಗ್ರಾ,ಜಿಲ್ಲೆ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ.
ಪಟಾಕಿ ಸಿಡಿಮದ್ದು ಸಿಡಿಸಿರುವುದರಿಂದ ಜಿಲ್ಲೆಯಲ್ಲಿ ಓರ್ವ ಮೃತ ಪಟ್ಟಿದ್ದು ಒಂಬತ್ತು ಜನರಿಗೆ ತ್ರೀವವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಾಗಲೀ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.