ನಿಶ್ಚಿತಾರ್ಥ ಹಾಗೂ ನೂತನ ಗೃಹ ಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಬಾಗಲಕೋಟೆಗೆ ಮರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಮಂಗಳವಾರ ಸಂಭವಿಸಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮೂರಕೈ ಗ್ರಾಮ ಮೂಲದ ವಿಠಲ್ ಶೆಟ್ಟಿ (55) ಶಶಿಕಲಾ ಶೆಟ್ಟಿ (44), ಸಂದೀಪ್ ಶೆಟ್ಟಿ (26), ಶ್ವೇತಾ ಶೆಟ್ಟಿ (29) ಹಾಗೂ ಅಂಜಲಿ ಶೆಟ್ಟಿ (26) ಎಂದು ಗುರುತಿಸಲಾಗಿದೆ. ವಿಠಲ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಕಳೆದ ಹಲವು ವರ್ಷಗಳಿಂದ ಬಾಗಲಕೋಟೆಯ ಕುಳಗೇರಿ ಕ್ರಾಸ್ ಬಳಿ ಹೋಟೆಲ್ ನಡೆಸಿಕೊಂಡಿದ್ದರು. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.