ದಾವಣಗೆರೆ :ಜಿಲ್ಲೆಯಲ್ಲಿ 63,700 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು ಸದ್ಯ ಭತ್ತದ ಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಿದೆ.
ರೈತರು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದು. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಅತಿಹೆಚ್ಚು ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ.
ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಪರಿಷ್ಕರಿಸಲಾಗಿರುತ್ತದೆ. ಅತಿವೃಷ್ಟಿ ಸಂಕಷ್ಟದ ಸಂದರ್ಭದಲ್ಲಿ ಬೆಲ್ಟ್, ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.2600/- ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ, ಪ್ರತಿ ಗಂಟೆಗೆ ರೂ.1900/-ಮೀರದಂತೆ ಬಾಡಿಗೆಯನ್ನು ನಿಗಧಿಪಡಿಸಿದೆ. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅತಿವೃಷ್ಟಿ ಸಂಕಷ್ಟದ ದಿನಗಳಲ್ಲಿ ಸಹಕರಿಸಬೇಕು. ಭತ್ತ ಕಟಾವು ಯಂತ್ರದ ಮಾಲೀಕರು ಹೆಚ್ಚಿನ ದರ ನಿಗದಿಪಡಿಸಿದ್ದಲ್ಲಿ ರೈತರು ಕಂದಾಯ, ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.































