ಬೆಂಗಳೂರು: ಮೇ 20 ಹಾಗೂ 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಅಥವಾ ಸಿಇಟಿ ಪರೀಕ್ಷೆ ನಡೆಯಲಿದ್ದು,ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರೂ ಕೂಡ ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.
ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಅಂಥವರೂ ಸಿಇಟಿ ಪರೀಕ್ಷೆ ಬರೆಯಬೇಕು . ಸಿಇಟಿಗೆ ಹಾಜರಾದರೆ ಮಾತ್ರ ಅವರ ಪೂರಕ ಪಿಯು ಪರೀಕ್ಷೆ ಫಲಿತಾಂಶದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆಯಂತೆ.!