ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ಅವರಿಗೆ “ವರ್ಷದ ಅತ್ಯುತ್ತಮ ಕೈಗಾರಿಕಾ ನಾವೀನ್ಯತೆಯ ಶ್ರೇಷ್ಠ ವ್ಯಕ್ತಿ ೨೦೨೫ ಪ್ರಶಸ್ತಿ” ದೊರೆತಿದೆ.
ಬೆಂಗಳೂರಿನ ರಾಜ್ ಭವನ ರಸ್ತೆಯಲ್ಲಿರುವ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಶನಿವಾರದಂದು ಬೆಂಗಳೂರು ಶಾಖೆ ಟೆರಿಯಲ್ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್‌ನ ಸ್ಕೇಲ್ ೨೦೨೫ ರ ಬೆಳ್ಳಿ ಮಹೋತ್ಸವದಲ್ಲಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.
ಈ ಪ್ರಶಸ್ತಿಯನ್ನು ಟೆರಿಯಲ್ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್‌ನ ಸ್ಕೇಲ್ ರಾಷ್ಟ್ರೀಯ ಅಧ್ಯಕ್ಷರು ನೀಡಿದ್ದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅವರ ಪರವಾಗಿ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಕ್ಯಾಪ್ಟನ್ ರಾಜೇಂದ್ರ ಅವರು ಪ್ರಶಸ್ತಿ ಸ್ವೀಕರಿಸಿದರು.