ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಹುತೇಕ ನೆನೆಗುದಿಗೆ ಬಿದ್ದಿದೆ.
ಏಕೆಂದರೆ ಕೆಎಎಸ್ ನೇಮಕಾತಿಯಲ್ಲಿ ಮೀಸಲಾತಿಯನ್ನು ಶೇಕಡ 56ಕ್ಕೆ ಹೆಚ್ಚಿಸಿರುವ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಕೆಎಎಸ್ ಆಕಾಂಕ್ಷಿ ಮಧು ಬಿ.ಎನ್. ಎಂಬುವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೆಎಟಿ ನೇಮಕಾತಿ ಅಧಿಸೂಚನೆಯನ್ನು ಅಮಾನತುಗೊಳಿಸಿದೆ
ಹೀಗಾಗಿ ಎರಡು ತಿಂಗಳ ಹಿಂದಿನ ಪರೀಕ್ಷೆ ಮೌಲ್ಯಮಾಪನ ಸ್ಥಬ್ಧವಾಗಿದೆ. ಮುಂದೆ ಏನೆಂದು ಗೊತ್ತಾಗದೆ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅಭ್ಯರ್ಥಿಗಳ ನೇಮಕಾತಿ ಭವಿಷ್ಯ ಈಗ ಹೈಕೋರ್ಟ್ ಆಂಗಳದಲ್ಲಿದೆ.