ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ನಿಧನರಾಗಿದ್ದಾರೆ. ಕಳೆದ ಕೆಲಕಾಲದಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ 1 ತಿಂಗಳಿನಿಂದ ಅನಾರೋಗ್ಯಕ್ಕೆ ಹಾಗೂ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. 1953ರಲ್ಲಿ ಆರ್‌ಎಸ್‌ಎಸ್ ಸೇರುವ ಮೂಲಕ ಸಾರ್ವಜನಿಕ ಜೀವನ ಆರಂಭಿಸಿದ ಅವರು, 1970ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದರು.
ಬೆಂಗಳೂರಿನ ಬಸವೇಶ್ವರ ನಗರದ ಮನೆಯಲ್ಲಿ ರಾಮಚಂದ್ರೇಗೌಡ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.00 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
































