ಚಿತ್ರದುರ್ಗ; ಮಾಜಿ ಮುಖ್ಯಮಂತ್ರಿಗಳಾದ ದಿ.ಎಸ್.ನಿಜಲಿಂಗಪ್ಪನವರು ವಾಸವಿದ್ದ ಮನೆಯನ್ನು ಸರ್ಕಾರ ಖರೀದಿಮಾಡಿದೆ.!
ಮನೆಯನ್ನು ಖರೀದಿ ಮಾಡಿ ಸಂರಕ್ಷಣೆ ಮಾಡುವ ಸಂಬಂಧ ಹಿಂದೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಮೊತ್ತವನ್ನು ಬಿಡುಗಡೆಮಾಡಿದೆ.
ರೂ.4,18,49,016 ಗಳಿಗೆ ಮಾಜಿ ಮುಖ್ಯಮಂತ್ರಿಗಳಾದ ದಿ.ಎಸ್.ನಿಜಲಿಂಗಪ್ಪನವರ ವಾರಸುದಾರರಿಂದ ರೂ.4,18,49,016 ಗಳಿಗೆ ಕರ್ನಾಟಕ ರಾಜ್ಯ ಸರ್ಕಾರದ ಪರವಾಗಿ ರಾಜ್ಯಪಾಲರ ಹೆಸರಿಗೆ 2024ರ ಡಿ.10ರಂದು ಖರೀದಿ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.