ಕೇರಳ: ಕಮ್ಯುನಿಸ್ಟ್ ಹಿರಿಯ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಇದೀಗ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 101 ವರ್ಷ ವಯಸ್ಸಾಗಿತ್ತು. ನಾಳೆ ಆಲಪ್ಪುಳಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು ಹಾಗೂ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ.
ಜೂ.23 ರಂದು ಹೃದಯಾಘಾತವಾದ ನಂತರ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಂದಿನಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.