ಬೆಳಗಾವಿ: ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ (70) ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1999ರಿಂದ 2013 ರವರೆಗೆ ಸತತ 3 ಬಾರಿ ನಿಪ್ಪಾಣಿ ವಿಧಾನ ಸಭಾ ಕ್ಷೇತ್ರದಿಂದ ಕಾಕಾಸಾಹೇಬ್ ಪಾಟೀಲ್ ಶಾಸಕರಾಗಿದ್ದರು. ನಿಪ್ಪಾಣಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ.