ಮೈಸೂರು: ಬೆಂಗಳೂರಿನ ಚಾಮರಾಜಪೇಟೆ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಆರ್.ವಿ. ದೇವರಾಜ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸೋಮವಾರ ಕುಟುಂಬ ಸದಸ್ಯರೊಂದಿಗೆ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ್ದ ದೇವರಾಜ್ ಹೃದಯಾಘಾತದಿಂದ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಜಯದೇವ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಡಿಸೆಂಬರ್ 3ರಂದು ದೇವರಾಜ್ ಅವರ 68ನೇ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಮೈಸೂರಿಗೆ ಹೋಗುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ.
































