ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಭಂಡಾರಿ ಅವರು ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಸುದೀಪ್ ಭಂಡಾರಿ ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.