ನವದೆಹಲಿ: ಉದಾರ ಆರ್ಥಿಕತೆಯ ಪಿತಾಮಹ, ಸರ್ವಶ್ರೇಷ್ಠ ಹಣಕಾಸು ಸಚಿವ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ಶನಿವಾರ ನೆರವೇರಿತು. ಡಿ.26 ರಂದು ರಾತ್ರಿ ವಿಧಿವಶರಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ(ಡಿ.28) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು.
ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿತು. ಕುಟುಂಬಸ್ಥರು ಚಿತೆಗೆ ಕಟ್ಟಿಗೆ ಜೋಡಿಸಿದ್ದು, ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಪಾರ್ಥಿವ ಶರೀರದ ಮುಂದೆ ಸುಮಾರು 30 ನಿಮಿಷ ಶ್ಲೋಕ ಪಠಿಸಲಾಯಿತು. ಈ ವೇಳೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜೆಪಿ ನಡ್ಡಾ ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ಹಲವು ರಾಜಕೀಯ ನಾಯಕರು ಉಪಸ್ಥಿತರಿದ್ದರು.