ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಚಿತಾಭಸ್ಮವನ್ನು ದೆಹಲಿಯ ಗುರುದ್ವಾರ ಮಜ್ನು ಕಾ ತಿಲಾ ಸಾಹಿಬ್ ಬಳಿಯ ಯಮುನಾ ಘಾಟ್ನಲ್ಲಿ ವಿಸರ್ಜನೆ ಮಾಡಲಾಯಿತು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕುಟುಂಬ, ಸ್ನೇಹಿತರು, ಸಹೋದ್ಯೋಗಿಗಳು ಮತ್ತು ಸರ್ಕಾರಿ ಗಣ್ಯರ ಸಮ್ಮುಖದಲ್ಲಿ ದೆಹಲಿಯ ಕಾಶ್ಮೀರ್ ಗೇಟ್ನಲ್ಲಿರುವ ನಿಗಮಬೋಧ್ ಘಾಟ್ನಲ್ಲಿ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಮುಂಜಾನೆ ಮಾಜಿ ಪ್ರಧಾನಿ ಅವರ ಪಾರ್ಥಿವ ಶರೀರದ ಬಳಿ ಮಾಲಾರ್ಪಣೆ ಮಾಡುವ ಮೂಲಕ ಅಂತಿಮ ನಮನ ಸಲ್ಲಿಸಿದರು. ಸಿಖ್ ಸಂಪ್ರದಾಯದಂತೆ ವಿಐಪಿ ಘಾಟ್ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಿಂಗ್ ಅವರ ದೇಹವನ್ನು ಶ್ರೀಗಂಧದ ತುಂಡುಗಳ ಚಿತೆಯ ಮೇಲೆ ಇರಿಸಲಾಗಿತ್ತು.