ಹೈದಾರಾಬಾದ್: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯಲ್ಲಾರೆಡ್ಡಿ ತಾಲೂಕಿನ ವೆಂಕಟಾಪುರ ಬಳಿ ಯುಗಾದಿ ದಿನವಾದ ಇಂದು ನಡೆದಿದೆ.
ತಾಯಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಮೀಪದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ದುರಂತ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ