ಭರೂಚ್ : ರಾಸಾಯನಿಕ ಘಟಕವೊಂದರಲ್ಲಿ ಸೋರಿಕೆಯಾದ ವಿಷಕಾರಿ ಅನಿಲ ಸೇವಿಸಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಪೈಪ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಆ ಅನಿಲ ಸೇವಿಸಿ ಕಾರ್ಮಿಕರು ಪ್ರಜ್ಞಾಹೀನರಾಗಿದ್ದರು. ಕಾರ್ಮಿಕರನ್ನು ಭರೂಚ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.
ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಂದು ಪೊಲೀಸ್ ಅಧಿಕಾರಿಯೊಬ್ಬರು.