ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಅಧಿಕೃತ ವೆಬ್‌ಸೈಟ್ http://karnatakatemplesaccommodation.com ಇದರ ಬದಲಿಗೆ ವೆಬ್‌ಸೈಟನ್ನು ತೆರೆದು, ನಕಲಿ ವೆಬ್‌ಸೈಟ್ karnataka temple accommodation ಮೂಲಕ ಲಲಿತಾಂಬಿಕಾ ಅತಿಥಿ ಗ್ರಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ನಂಬಿಸಿ, ಕ್ಯೂ ಆರ್‌ಕೋಡ್ ಮೂಲಕ ಹಣ ಪಡೆದು ವಂಚಿಸಲಾಗಿದೆ.
ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ. ಅದರಂತೆ ಕೊಲ್ಲೂರು ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 53/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ.
				
															
                    
                    
                    
                    






























