ಬೆಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣವನ್ನು ಸರ್ಕಾರ ಘೋಷಿಸಿದೆ. ʻಶಕ್ತಿʼ ಯೋಜನೆಯಡಿ ಇದು ಜಾರಿಯಾಗಿದ್ದು ಮುಂದಿನ ಭಾನುವಾರದಿಂದ ಇದು ಅನ್ವಯವಾಗಲಿದೆ.
ರಾಜ್ಯದಲ್ಲಿ ನೆಲೆಸಿರುವ ಬಗ್ಗೆ ಯಾವುದಾದರೂ ಒಂದು ಐಡಿ ಕಾರ್ಡ್ ತೋರಿಸಿ ಮಹಿಳೆಯರು ರಾಜ್ಯದ ವಿವಿಧ ಮೂಲೆಗಳಿಗೆ ಪ್ರಯಾಣ ಮಾಡಬಹುದು. ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣಿಸಲು ಮಾತ್ರ ಈ ಯೋಜನೆಯಲ್ಲಿ ಅವಕಾಶವಿದೆ.