ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ನಗರ ಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಸಹಯೋಗದಲ್ಲಿ ಚಿತ್ರದುರ್ಗ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಮೇ 27 ರಂದು ಸಂಜೆ 4 ಗಂಟೆಗೆ ಉಚಿತ ಕಣ್ಣಿನ ತಪಾಸಣೆ, ಶಸ್ತçಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಆಯೋಜಿಸಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕಾರ್ಯಕ್ರಮ ಉದ್ಘಾಟಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತರಿರುವರು. ನಗರಸಭೆ ಅಧ್ಯಕ್ಷೆ ಸುಮಿತಾ.ಬಿ.ಎನ್. ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿ.ಪಂ.ಸಿಇಓ ಸೋಮಶೇಖರ್.ಎಸ್.ಜೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್.ಜಿ.ಪಿ, ಜಿಲ್ಲಾ ಶಸ್ತçಚಿಕಿತ್ಸೆ ಡಾ.ರವೀಂದ್ರ, ಡಿಡಿಪಿಐ ಮಂಜುನಾಥ್, ಪೌರಾಯುಕ್ತೆ ರೇಣುಕಾ.ಎಂ, ನಗರ ಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ.ಜಿ.ಎಸ್, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್.ಜಿ.ಓ, ತಹಶೀಲ್ದಾರ್ ಗೋವಿಂದ್‌ರಾಜ್.ಬಿ.ಎA., ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗವಹಿಸುವರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಯವರು ಕ್ಷೇತ್ರದ 22 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಿದ್ದಾರೆ. ಇದರಲ್ಲಿ 6451 ಜನರು ಪರೀಕ್ಷೆ ನಡೆಸಿದ್ದು, 667 ಜನರಿಗೆ ಕಣ್ಣಿನ ಶಸ್ತçಚಿಕಿತ್ಸೆ ನಡೆಸಲಾಗಿದೆ. 2460 ಜನರು ಕನ್ನಡಕ ಪಡೆದಿದ್ದಾರೆ. ಮೇ 27 ಶಿಬಿರದಲ್ಲಿ ಹೆಚ್ಚಿನ ಜನರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳೂವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.