ಚಿತ್ರದುರ್ಗ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್‍ಗಳನ್ನು ನೀಡಲಾಗುತ್ತಿದೆ. ಈ ಸಂಬಂಧ ಅರ್ಜಿ ಅಹ್ವಾನಿಸಲಾಗಿದೆ. ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಚಿತ್ರದುರ್ಗ ಉಪವಿಭಾಗ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿ, ಚಿತ್ರದುರ್ಗ ಉಪವಿಭಾಗ, ಜೆ.ಸಿ.ಆರ್.ಬಡಾವಣೆ, ಎಸ್‍ಬಿಎಂ ಬ್ಯಾಂಕ್, 1ನೇ ಮಹಡಿ, ಚಿತ್ರದುರ್ಗ ಇವರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇದೇ ಸೆಪ್ಟೆಂಬರ್ 16 ಅಂತಿಮ ದಿನವಾಗಿರುತ್ತದೆ. ತದನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-231394 ಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.