ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.