ರಸ್ತೆ ಅಪಘಾತ ಕಡಿಮೆ ಮಾಡುವ ಸಲುವಾಗಿ ಹಾಗೂ ದ್ವಿಚಕ್ರ ವಾಹನಗಳು ಅಪಘಾತ ಸಂಭವಿಸಿದಾಗ ಸಂಭವಿಸುವ ಸಾವು ನೋವಿನ ಪ್ರಮಾಣ ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ ಹೊಸ ನಿಯಮವನ್ನು ಜಾರಿಗೆ ತಂದಿದೆ.
ಹೆಲೈಟ್ ಇಲ್ಲದಿದ್ದರೆ ಇಂಧನ ಇಲ್ಲ’ ಎನ್ನುವ ಯೋಜನೆ ರಾಜ್ಯದ ನಗರಗಳಲ್ಲಿ ಜಾರಿಗೆ ತಂದಿದೆ. ಬೈಕ್ ಸವಾರ ಅಥವಾ ಹಿಂಬದಿ ಸವಾರ ಹೆಲೈಟ್ ಧರಿಸದೇ ಇದ್ದರೆ ಅಂಥವರಿಗೆ ಇಂಧನ ಮಾರಾಟ ಮಾಡಕೂಡದು ಎಂದು ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ನಿರ್ದೇಶನ ನೀಡಿ ಜನವರಿ 8ರಂದು ರಾಜ್ಯದ ಸಾರಿಗೆ ಆಯುಕ್ತ ಬ್ರಜೇಶ್ ನರೈನ್ ಸಿಂಗ್ ಪತ್ರ ಬರೆದಿದ್ದಾರೆ.
ಈ ಪತ್ರವನ್ನು ಎಲ್ಲಾ 75 ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗಿದ್ದು, ಈ ಬಗ್ಗೆ ತುರ್ತು ಗಮನಹರಿಸಬೇಕು ಎಂದು ಸೂಚಿಸಲಾಗಿದೆ. ಹೆಲ್ಮೆಟ್ ಧರಿಸದೇ ಇರುವುದರಿಂದ ಸಾವುನೋವಿನ ಸಂಖ್ಯೆಯ ದತ್ತಾಂಶವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.