ಬೆಂಗಳೂರು: ಇಂದಿನಿಂದ ಬೆಳಗಾವಿ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ಕುರಿತು ಉಂಟಾಗಿರುವ ಗೊಂದಲದ ಮಧ್ಯೆಯೇ ಬೆಳಗಾವಿಯ ಸುವರ್ಣ ವಿಧಾನಸೌಧ ದಲ್ಲಿ ವಿಧಾನಮಂಡಲ ಅಧಿವೇಶನದ ಆರಂಭವಾಗಲಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆ ವಿಷಯವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಅಧಿಕಾರ ಹಂಚಿಕೆಯ ವಿಚಾರದಿಂದ ಉಂಟಾಗಬಹುದಾದ ಮುಜುಗರವನ್ನು ತಪ್ಪಿಸಿಕೊಳ್ಳಲು ಉಪಾಹಾರ ಕೂಟದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಅವರು ಗೊಂದಲವನ್ನು ಬದಿಗೆ ಸರಿಸಿ ಒಗ್ಗಟಿನ ಮಂತ್ರ ಜಪಿಸಿದ್ದಾರೆ.

































