ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ರಾಜ್ಯದ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಕ್ಷೇತ್ರಗಳ ಸೀಮಾ ನಿರ್ಣಯ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.
ರಾಜ್ಯ ಸರ್ಕಾರದಿಂದ ಹೊರಡಿಸಿರುವಂತ ಪರಿಷ್ಕೃತ ಮಾರ್ಗಸೂಚಿ ಅನ್ವಯ ಆಯಾ ಕ್ಷೇತ್ರಗಳ ಗಡಿಯನ್ನು ಗುರುತಿಸಬೇಕು. ಗಡಿ ಗುರಿತಿಸದ ಬಳಿಕ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು, ಪರಿಶೀಲಿಸಿ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಜಿಲ್ಲಾ ಪಂಚಾಯ್ತಿ ಕ್ಷೇತ್ರ ಗಡಿ ವ್ಯಾಪ್ತಿ
ಜಿಲ್ಲಾ ಪಂಚಾಯ್ತಿ ಚುನಾಯಿತ ಸದಸ್ಯರಲ್ಲಿ, ಜಿಲ್ಲೆಯ ತಾಲೂಕುಗಳಿಗಿಂತ 25ಕ್ಕಿಂತಲೂ ಕಡಿಮೆ ಇಲ್ಲದಂತೆ ಚುನಾಯಿತ ಸದಸ್ಯರಿರತಕ್ಕದ್ದು. ಪ್ರತಿಯೊಂದು ತಾಲೂಕಿನಿಂದ ಚುನಾಯಿತರಾಗತಕ್ಕ ಸದಸ್ಯರ ಸಂಖ್ಯೆಯ 40 ಸಾವಿರ ಜನಸಂಖ್ಯೆಗೆ ಅಥವಾ ಅದರ ಭಾಗಕ್ಕೆ ಒಬ್ಬ ಸದಸ್ಯನಂತೆ ನಿಗದಿಪಡಿಸಲಾಗಿದೆ.
ತಾಲೂಕು ಪಂಚಾಯ್ತಿ ಗಡಿ ವ್ಯಾಪ್ತಿ
ತಾಲೂಕು ಪಂಚಾಯ್ತಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸುವಾಗ 2.30 ಲಕ್ಷಕ್ಕೆ ಮೀರಿದ ಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ತಾಲೂಕುಗಳಲ್ಲಿ ಪ್ರತಿ 12 ಸಾವಿರಕ್ಕೆ ಕಡಿಮೆಯಿಲ್ಲದ ಜನಸಂಖ್ಯೆಗೆ ಒಬ್ಬ ಚುನಾಯಿತ ಸದಸ್ಯ ಇರತಕ್ಕದ್ದು ಎಂದಿದೆ.
1 ಲಕ್ಷ ಮೀರಿದ ಆದರೇ 2.30 ಲಕ್ಷ ಮೀರದ ಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ತಾಲೂಕುಗಳಲ್ಲಿ ಪ್ರತಿ 10 ಸಾವಿರಕ್ಕೆ ಕಡಿಮೆಯಿಲ್ಲದ, ಜನಸಂಖ್ಯೆಗೆ ಒಬ್ಬ ಚುನಾಯಿತ ಸದಸ್ಯನು ಇರತಕ್ಕದ್ದು ಎಂದಿದೆ.