ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ 31ರ ಒಳಗೆ ಧರ್ಮಸ್ಥಳ ಪ್ರಕರಣ ಸಂಪೂರ್ಣಗೊಳ್ಳುತ್ತದೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದು, ಅಕ್ಟೋಬರ್ 31ರ ಒಳಗಾಗಿ ಸೊಸೈಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ಕುರಿತು ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಧರ್ಮಸ್ಥಳ ವಿರುದ್ಧ ರೂಪಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ ನಲ್ಲಿ ಎಸ್ಐಟಿ ವರದಿ ನೀಡುವುದಾಗಿ ಹೇಳಿದೆ ಅಕ್ಟೋಬರ್ 31ರ ಒಳಗೆ ತನಿಖಾ ವರದಿ ಕೊಡಬಹುದು ಒಂದೆರಡು ದಿನ ಹಿಂದೆ ಮುಂದೆ ಆಗಬಹುದು ಅಷ್ಟೇ ಎಲ್ಲವನ್ನು ಸೇರಿಸಿ ಕೊಡಲು ಹೇಳಿದ್ದೇವೆ ಯಾವ ರೀತಿ ವರದಿ ಕೊಡುತ್ತಾರೆ ಅನ್ನುವುದು ನೋಡಬೇಕು ಅಂತ ಹೇಳಿದ್ದಾರೆ ಎಂದು ಜಿ ಪರಮೇಶ್ವರ್ ತಿಳಿಸಿದರು

































