ಮುಂಬೈ : ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿದ್ದು, ಇದೀಗ ನಾಯಕ ರೋಹಿತ್ ಶರ್ಮಾರನ್ನೇ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಈ ಮಧ್ಯೆ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್‌ಗೂ ಮುಖ್ಯ ಕೋಚ್ ಹುದ್ದೆಯಿಂದ ಗೇಟ್ ಪಾಸ್ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ವರದಿಯ ಪ್ರಕಾರ, ಮುಂದಿನ ತಿಂಗಳು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ನಂತರ ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಹುದ್ದೆಯಿಂದ ತೆಗೆದುಹಾಕಬಹುದು. ಗೌತಮ್ ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ತಂಡದ ಮುಖ್ಯ ಕೋಚ್ ಆಗಿ ಜವಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂಬರುವ ಇಂಗ್ಲೆಂಡ್ ಪ್ರವಾಸದಲ್ಲಿ ವಿವಿಎಸ್ ಲಕ್ಷ್ಮಣ್ ಅವರು ತಂಡದ ಮುಖ್ಯ ಕೋಚ್ ಆಗಲಿದ್ದು, ಗೌತಮ್ ಗಂಭೀರ್ ಅವರನ್ನು ಟೆಸ್ಟ್ ತಂಡದ ಕೋಚಿಂಗ್‌ನಿಂದ ತೆಗೆದುಹಾಕುವ ಚಿಂತನೆಯಲ್ಲಿ ಬಿಸಿಸಿಐ ಇದೆ. ಅಂದರೆ ಗಂಭೀರ್ ಅವರನ್ನು ಸೀಮಿತ ಓವರ್‌ಗಳ ಸ್ವರೂಪಕ್ಕೆ ಮುಖ್ಯ ಕೋಚ್ ಆಗಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ.