ಬೆಂಗಳೂರು: ಸ್ವಇಚ್ಚೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದೇನೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಯಾವುದೇ ಒತ್ತಡವಿಲ್ಲ. ನನ್ನ ಪತ್ರವನ್ನು ಕೇಂದ್ರ ನಾಯಕರು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ.
ಮುಂದಿನ ದಿನಗಳಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದೇ 6 ಮತ್ತು 7ರಂದು ನಡೆದ ಪಕ್ಷದ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಹಾಲಿ ಹಾಗೂ ಮಾಜಿ ಸಿಎಂ ಗಮನಕ್ಕೆ ತಂದಿದ್ದೆ ಎಂದು ಹೇಳಿದ್ದಾರೆ.