ಇನ್ನು ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ ನಡೆಸುವುದಾಗಿ ದಾವಣಗೆರೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು.
ಕನ್ನಡದಲ್ಲೇ ಪರೀಕ್ಷೆ ಬರೆಯಲು ಮತ್ತು ಓದಲು ಪುಸ್ತಕಗಳು ಸಿಗುತ್ತವೆ. ಉಪಯೋಗಿಸಿಕೊಳ್ಳಿ ಎಂದು ವಿ ಸೋಮಣ್ಣ ತಿಳಿಸಿದ್ದಾರೆ.