ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಅದರಲ್ಲೂ ಬಿಪಿಎಲ್ ಕಾರ್ಡ್ದಾರರು ಸರ್ಕಾರದ ಹೆಚ್ಚಿನ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಇದೀಗ ಸರ್ಕಾರ BPL ಕಾರ್ಡ್ದಾರರಿಗೆ ಸಿಹಿ ಸುದ್ದಿ ನೀಡಿದೆ. ಹೌದು, ಬಿಪಿಎಲ್ ಕಾರ್ಡ್ದಾರರು ಪಡಿತರ ಪಡೆಯುವುದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ಹೇಳಲಾಗುತ್ತಿತ್ತು.
ಆದರೇ ಎಲ್ಲರ ವೇತನ ಪ್ರಮಾಣಪತ್ರ ನೀಡುವುದು ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ.